ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಸಂಘಟನೆಯ ಸದಸ್ಯರು ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ತಮಟೆ ಚಳವಳಿ ನಡೆಸಿದರು.
`ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗ ವರದಿ ಸಲ್ಲಿಸಿ ಬಹು ಸಮಯವೇ ಕಳೆದಿದ್ದರೂ, ವರದಿಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಿಲ್ಲ. ಆಯೋಗದ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
`ಪರಿಶಿಷ್ಟ ಜಾತಿಯ ಶೇ 15ರಷ್ಟು ಮೀಸಲಾತಿಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿರುವ ಆಯೋಗ ಹಿಂದುಳಿದ ವರ್ಗಗಳಿಗೆ ಸಮನಾಗಿ ಹಂಚಿಕೆ ಮಾಡಿದೆ. ಆಯೋಗವು ನಿಸ್ಪಕ್ಷಪಾತ ಸಮೀಕ್ಷೆ ನಡೆಸಿ 200 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಸರ್ಕಾರ ವರದಿಯನ್ನು ಮೂಲೆಗುಂಪು ಮಾಡಿದೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.