
ಪ್ರಜಾವಾಣಿ ವಾರ್ತೆಬೆಂಗಳೂರು: ನಗರದ ನಾಗರಬಾವಿ ವರ್ತುಲ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಮಳಿಗೆಯೊಂದರ ಗೋದಾಮಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರೆಫ್ರಿಜರೇಟರ್‌ಗಳು ಸುಟ್ಟು ಹೋಗಿವೆ.
ಮಳಿಗೆಯ ಎರಡನೇ ಅಂತಸ್ತಿನಲ್ಲಿರುವ ಗೋದಾಮಿನ ಒಳ ಭಾಗದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದನ್ನು ನೋಡಿದ ಮಳಿಗೆಯ ಕೆಲಸಗಾರರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದರು. ಆರು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅರ್ಧ ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದರು. ಶಾರ್ಟ್ ಸರ್ಕಿಟ್‌ನಿಂದ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದೆ~ ಎಂದು ಪಶ್ಚಿಮ ವಲಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಜೆ.ಎಚ್.ರವಿಶಂಕರ್ `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.