
ಪ್ರಜಾವಾಣಿ ವಾರ್ತೆಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರ ಸಂಜೆ ರಾಜ್ಯಸಭಾ ಸದಸ್ಯ ಎಸ್. ಎಂ.ಕೃಷ್ಣ ಅವರನ್ನು ಭೇಟಿ ಮಾಡಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಅವಧಿಗೂ ಮೊದಲೇ ಲೋಕಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಕಾರಣ ಈ ಭೇಟಿ ಮಹತ್ವ ಪಡೆದಿದೆ. ಕೃಷ್ಣ ಅವರ ಸದಾಶಿವನಗರದ ನಿವಾಸದಲ್ಲಿ ಇಬ್ಬರೂ ಮುಖಂಡರು ಚರ್ಚೆ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಕ್ಷೇತ್ರಕ್ಕೂ ವೀಕ್ಷಕರನ್ನು ನೇಮಿಸಬೇಕಿದೆ. ಯಾರನ್ನು ಯಾವ ಕ್ಷೇತ್ರದ ವೀಕ್ಷಕರಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.