ಬೆಂಗಳೂರು: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಆಗಸ್ಟ್ 30 ರೊಳಗೆ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
`ರಾಜ್ಯದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಅಥವಾ ಕಾಲೇಜುಗಳ ಪ್ರಾಂಶುಪಾಲರು ಶುಲ್ಕವನ್ನು ಸಂಗ್ರಹಿಸಿ ಬ್ಯಾಂಕ್ ಹುಂಡಿಯ ಬದಲಾಗಿ ಬ್ಯಾಂಕ್ ಚಲನ್‌ಗಳ ಮೂಲಕ ಪಾವತಿಸುವ ಕ್ರಮವನ್ನು ಈ ಬಾರಿಯಿಂದ ಜಾರಿಗೆ ತರಲಾಗಿದೆ. ಇದಕ್ಕೆ ಸೂಕ್ತ ವಿಧಾನವನ್ನು ವಿವರಿಸಿ ಮಂಡಳಿಯು ಅಧಿಸೂಚನೆ ಹೊರಡಿಸಿ ಎಲ್ಲ ಶಾಲಾ ಕಾಲೇಜುಗಳಿಗೆ ರವಾನಿಸಿದೆ~ ಎಂದು ಮಂಡಳಿಯ ನಿರ್ದೇಶಕ ಡಿ.ವೆಂಕಟೇಶಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.