ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ (ಐಸಿಡಿಎಸ್) ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಶಿಫಾರಸು ಆಧರಿಸಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಉಷಾ ಪಟ್ವಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಐಸಿಡಿಎಸ್ ಯೋಜನೆಯಲ್ಲಿ ಅವ್ಯವಹಾರ ನಡೆಸಿರುವುದು ಮತ್ತು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಪಟ್ವಾರಿ, ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮುನಿರಾಜು ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ನಡೆದ ಸಂದರ್ಭದಲ್ಲಿ ಉಷಾ ಅವರು ಐಸಿಡಿಎಸ್ ಜಂಟಿ ನಿರ್ದೇಶಕರಾಗಿದ್ದರು. ನಂತರ ಅವರನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಲಾಗಿತ್ತು.
ಪ್ರಕರಣ ದಾಖಲಾದ ಕೆಲ ದಿನಗಳಲ್ಲೇ ಮುನಿರಾಜು ಅವರನ್ನು ಅಮಾನತು ಮಾಡಲಾಗಿತ್ತು. ಶಮ್ಲಾ ಅವರನ್ನು ಇತ್ತೀಚೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಸೋಮವಾರ ಉಷಾ ಪಟ್ವಾರಿ ಅವರನ್ನೂ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.