ಯಲಹಂಕ: ‘ಪೋಷಕರು ಎಂದೂ ತಮ್ಮ ಬಗ್ಗೆ ಚಿಂತಿಸದೆ ಸದಾ ಮಕ್ಕಳನ್ನು ವಿದ್ಯಾ ವಂತರನ್ನಾಗಿ ಮಾಡುವ ದಿಸೆಯಲ್ಲಿ ಹಲವಾರು ರೀತಿಯಲ್ಲಿ ಶ್ರಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮಕ್ಕಳು ಉತ್ತಮ ವಿದ್ಯೆ ಪಡೆದು ಪೋಷಕರಿಗೆ ತಕ್ಕ ಪ್ರತಿಫಲ ನೀಡಬೇಕು’ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರವಿಕುಮಾರ್ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಜಕ್ಕೂರಿನ ಕೆನ್ನಿ ಆಂಗ್ಲ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೀಳ್ಕೊ ಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
‘ಪರೀಕ್ಷೆಗಳು ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಕಾಲಹರಣ ಮಾಡದೆ ಸದಾ ಓದಿನ ಕಡೆಗೆ ತಮ್ಮ ಚಿತ್ತವನ್ನು ಕೇಂದ್ರೀಕರಿಸುವ ಮೂಲಕ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು’ ಎಂದು ಸಲಹೆ ನೀಡಿದರು.
ಮುಖ್ಯ ಶಿಕ್ಷಕ ಆನಂದ ಕುಲಕರ್ಣಿ, ಸಹಶಿಕ್ಷಕ ಶಂಕರ್ ಬಿ.ಪಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.