ADVERTISEMENT

ಔಷಧಿ ವ್ಯಾಪಾರಿಗಳ ಸೇವೆ ಶ್ಲಾಘನೀಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ಹೊಸಕೋಟೆ: ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಔಷಧಿ ವ್ಯಾಪಾರಿಗಳ ಸೇವೆ ಶ್ಲಾಘನೀಯ ಎಂದು ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಡಿ.ಎಸ್.ಗುಡ್ಡೋಡಗಿ ಹೇಳಿದರು.

ಹೊಸಕೋಟೆ ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘ ಮತ್ತು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಿರಂತರ ಕಲಿಕಾ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಬೆಂಗಳೂರು ವಲಯ ಉಪ ಔಷಧಿ ನಿಯಂತ್ರಕ ಅಬುಲ್ ಮೊಯಿಸಿನ್ ಉದ್ಘಾಟಿಸಿದರು. ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ನಿರಂತರ ಕಲಿಕಾ ಕಾರ್ಯಕ್ರಮದ ಅಧ್ಯಕ್ಷ ಎಸ್.ಶಿವಾನಂದ, ಹೊಸಕೋಟೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಕೆ.ನಾಗರಾಜ್ ಮಾತನಾಡಿದರು.

ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಆರ್.ಗೋವಿಂದರಾಜು ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಟಿ.ರಾಮಾಂಜನಿ, ಉಪಾಧ್ಯಕ್ಷ ಆರ್.ಸುರೇಂದ್ರಕುಮಾರ್ ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.