ADVERTISEMENT

ಕಟ್ಟಡ ನಿರ್ಮಾಣಕ್ಕೆ ಉಸ್ತುವಾರಿ ಸಮಿತಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2012, 19:30 IST
Last Updated 6 ಮಾರ್ಚ್ 2012, 19:30 IST

ಬೆಂಗಳೂರು: ಕೋಲಾರದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾರ್ಯದ ಉಸ್ತುವಾರಿ ನೋಡಿಕೊಳ್ಳಲು ಸಿಂಡಿಕೇಟ್ ಸದಸ್ಯರ ಉಪ ಸಮಿತಿ ರಚಿಸುವುದಾಗಿ ಕುಲಪತಿ ಡಾ.ಎನ್.ಪ್ರಭುದೇವ್ ಪ್ರಕಟಿಸಿದ್ದಾರೆ.

ಗುತ್ತಿಗೆದಾರರಿಗೆ ಕಾಮಗಾರಿ ಆದೇಶ ನೀಡುವುದಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಿಂಡಿಕೇಟ್ ಸದಸ್ಯರಿಗೆ ಫೆ. 29ರಂದು ತಾವು ಬರೆದ ಪತ್ರವನ್ನು ವಾಪಸ್ ಪಡೆಯುತ್ತಿರುವುದಾಗಿ ಪ್ರಭುದೇವ್ ತಿಳಿಸಿದ್ದಾರೆ.

ಮುಖ್ಯ ಎಂಜಿನಿಯರ್ ಪುಟ್ಟಸ್ವಾಮಿ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದ್ದ ಪ್ರಭುದೇವ್ ಅವರ ಕ್ರಮದ ವಿರುದ್ಧ ಸಿಂಡಿಕೇಟ್ ಸದಸ್ಯ ಡಾ.ಕೆ.ವಿ.ಆಚಾರ್ಯ, ಬೆಂಗಳೂರು ವಿ.ವಿ ಶಿಕ್ಷಕೇತರ ನೌಕರರ ಸಂಘ ಹಾಗೂ ಬೆಂಗಳೂರು ವಿ.ವಿ ಪರಿಶಿಷ್ಟ ಜಾತಿ ಮತ್ತು ಪಂಗಡ ಶಿಕ್ಷಕೇತರ ನೌಕರರ ಸಂಘಗಳ ಪದಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಪತ್ರ ವಾಪಸ್ ಪಡೆಯಲು ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.