ADVERTISEMENT

ಕಟ್ಟಡ ನಿರ್ಮಾಣ: ಕಾರ್ಯಾದೇಶ ಪತ್ರ ನೀಡಿಕೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2011, 19:55 IST
Last Updated 6 ಅಕ್ಟೋಬರ್ 2011, 19:55 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಕೋಲಾರ ಸ್ನಾತಕೋತ್ತರ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಇದೇ 7ರೊಳಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು.

ಸರ್ಕಾರ ಸೆ. 26ರಂದು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಂಡಿಕೇಟ್ ಸಮಿತಿಯು ಕೋಲಾರದಲ್ಲಿ ಸ್ನಾತಕೋತ್ತರ ಕೇಂದ್ರ ಕಟ್ಟಡದ ನಿರ್ಮಾಣ ಕಾರ್ಯವನ್ನು ಈ ಹಿಂದೆ ಮಾಡಿಕೊಳ್ಳಲಾದ ಒಡಂಬಡಿಕೆಯಂತೆ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದೆ.

ಅದರಂತೆ ವಿ.ವಿ ಎಂಜಿನಿಯರ್, ಇದೇ 7ರೊಳಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡಬೇಕು.  ಒಪ್ಪಂದದ ಹೊರತಾಗಿ ಗುತ್ತಿಗೆದಾರರಿಗೆ ಮುಂಗಡವಾಗಿ ಹಣ ನೀಡುವಂತಿಲ್ಲ. ಕಾಮಗಾರಿ ವಿಳಂಬವಾದರೆ ಅದನ್ನು ಗಂಭೀರವಾಗಿ ಪರಿಗಣಿಸಿ ಗುತ್ತಿಗೆ ಒಪ್ಪಂದದ ಪ್ರಕಾರ ಕ್ರಮ ಜರುಗಿಸುವ ನಿರ್ಣಯ ಕೈಗೊಳ್ಳಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಈ ನಿರ್ಣಯಗಳಿಗೆ ಒಂಬತ್ತು ಮಂದಿ ಸದಸ್ಯರು ಅನುಮೋದನೆ ನೀಡಿದರೆ, ನಾಲ್ಕು ಮಂದಿ ವಿರೋಧ ವ್ಯಕ್ತಪಡಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT