ADVERTISEMENT

ಕಟ್ಟಡ ನೆಲಸಮ: ಮುಂದುವರಿದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 19:30 IST
Last Updated 14 ಮಾರ್ಚ್ 2012, 19:30 IST

ಆನೇಕಲ್: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದ ವಿನಾಯಕ ನಗರ ಬಡಾವಣೆಯಲ್ಲಿ ವಾಲಿದ್ದ ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡದ ನೆಲಸಮ ಕಾರ್ಯ ಮುಂದುವರಿದಿದೆ ಎಂದು ತಹಶೀಲ್ದಾರ್ ಎಚ್.ಎನ್. ಶಿವೇಗೌಡ ಮಾಹಿತಿ ನೀಡಿದ್ದಾರೆ.

ಬುಧವಾರ ಕಟ್ಟಡದ ನೆಲಸಮ ಕಾರ್ಯ ಕಾಲು ಭಾಗ ಮಾತ್ರ ನಡೆದಿದೆ. ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿಯಾಗದಂತೆ ಅಪಾರ್ಟ್‌ಮೆಂಟ್ ಅನ್ನು ನೆಲಸಮಗೊಳಿಸಬೇಕಿದೆ. ಆದ ಕಾರಣ ಕಾರ್ಯಾಚರಣೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ. ಅಪಾರ್ಟ್‌ಮೆಂಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.