ADVERTISEMENT

ಕಟ್ಟಾ ಅ.26ರವರೆಗೆ ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:25 IST
Last Updated 19 ಸೆಪ್ಟೆಂಬರ್ 2011, 19:25 IST

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಭೂ ಹಗರಣದಲ್ಲಿ ಆರೋಪಿಗಳಾಗಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಪುತ್ರ ಕಟ್ಟಾ ಜಗದೀಶ್ ಮತ್ತು ಇಟಾಸ್ಕಾ ಸಾಫ್ಟ್‌ವೇರ್ ಕಂಪೆನಿಯ ವ್ಯವಸ್ಥಾಪಕ ನಿರ್ದೇ ಶಕ ಎಂ.ವಿ.ಶ್ರೀನಿವಾಸ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 26ರವರೆಗೆ ವಿಸ್ತರಿಸ ಲಾಗಿದೆ.

ನ್ಯಾಯಾಲಯಕ್ಕೂ ಹಾಜರಾಗದೆ, ಜಾಮೀನು ಸಹ ಪಡೆಯದೆ ತಲೆಮರೆಸಿಕೊಂಡಿರುವ ಈ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ವೆಂಕಯ್ಯ ಮತ್ತು ಜಗ್ಗಯ್ಯ ಅವರನ್ನು ಘೋಷಿತ ಅಪರಾಧಿಗಳು ಎಂದು ಪರಿಗಣಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲ ಯದ ನ್ಯಾಯಾಧೀಶ ಎನ್. ಕೆ. ಸುಧೀಂದ್ರರಾವ್ ಆದೇಶಿಸಿದರು. ಅವ ರನ್ನು ಇದೇ 22ರಂದು ನ್ಯಾಯಾಲಯ ಮುಂದೆ ಹಾಜರು ಪಡಿಸುವಂತೆ ಲೋಕಾ ಯುಕ್ತ ಪೊಲೀಸರಿಗೆ ಸೂಚಿಸಿದರು.

ಪ್ರಕರಣದ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದರು. ಈ ಹಿಂದಿನ ಆದೇಶದ ಪ್ರಕಾರ ಸೋಮವಾರಕ್ಕೆ ಅವರ ಬಂಧನದ ಅವಧಿ ಮುಗಿದಿತ್ತು.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಕೋರಿ ವಕೀಲ ರವಿ ಬಿ.ನಾಯ್ಕ ಅರ್ಜಿ ಸಲ್ಲಿ ಸಿದ್ದು, ಅದರ ವಿಚಾರಣೆ ಇದೇ 24 ರಂದು ನಡೆಯಲಿದೆ. ಆಸ್ಪತ್ರೆಯಲ್ಲಿರುವ ನಾಯ್ಡು ಅವರು ಕೋರ್ಟ್‌ಗೆ ಗೈರು ಹಾಜರಾಗಿದ್ದರು. ಅವರ ಪುತ್ರ ಕಟ್ಟಾ ಜಗದೀಶ್ ಮತ್ತು ಶ್ರೀನಿವಾಸ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೆಐಎಡಿಬಿ ಭೂ ಹಗರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕಟ್ಟಾ ಅವರ ಜಾಮೀನು ಅರ್ಜಿಯನ್ನು ಈ ಹಿಂದೆಯೇ ಹೈಕೋರ್ಟ್ ವಜಾಗೊಳಿಸಿತ್ತು. ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಕಟ್ಟಾ ಅವರು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಾ ಅವರಿಗೆ ಚಿಕಿತ್ಸೆ ನೀಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಕಳೆದ ಶನಿವಾರ ನ್ಯಾಯಾಲಯಕ್ಕೆ ವರದಿ ನೀಡಿದ್ದು, ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಲಿಖಿತವಾಗಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಈ ಪತ್ರದ ಆಧಾರದ ಮೇಲೆ ಅವರ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.