ADVERTISEMENT

ಕನ್ನಡ ಶಿಕ್ಷಣದ ಮಾಧ್ಯಮವಾಗಬೇಕು-

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 20:31 IST
Last Updated 12 ಮಾರ್ಚ್ 2014, 20:31 IST


ಬೆಂಗಳೂರು: ‘ಕನ್ನಡ ಭಾಷೆ ಶಿಕ್ಷಣದ ಮಾಧ್ಯಮವಾಗುವಂತೆ ಕಾನೂನು ರೂಪಿಸಲು ರಾಜ್ಯ ಸರ್ಕಾರ ಪ್ರಯತ್ನಿಸಬೇಕು’ ಎಂದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು. ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮ.ರಾಮಮೂರ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ತಾರತಮ್ಯವಿದೆ. ಹೀಗಾಗಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು. ‘ನಮ್ಮ ಮೆಟ್ರೊ’ ಸೇರಿದಂತೆ ಅನೇಕ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಕಾರ್ಖಾನೆಗಳಲ್ಲಿ ಹಿಂದಿ ಭಾಷೆಯನ್ನು ಅನಗತ್ಯವಾಗಿ ಹೇರಲಾಗುತ್ತಿದೆ. ಇದು ಕನ್ನಡಕ್ಕೆ ಮಾಡುವ ದ್ರೋಹ’ ಎಂದರು.

ಶಾಸಕ ವೈ.ಎಸ್‌.ವಿ.ದತ್ತ ಮಾತ­ನಾಡಿ, ‘ಮ.ರಾಮಮೂರ್ತಿ-, ಅನಕೃ ನೇತೃತ್ವದಲ್ಲಿ ನಡೆದ ಕನ್ನಡ ಚಳವಳಿ ಸೈದ್ಧಾಂತಿಕ ನೆಲೆಯಲ್ಲಿ ಕನ್ನಡವನ್ನು ಕಟ್ಟಲು ಸಹಾಯಕವಾಗಿತ್ತು’ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬೆ.ರಾ.ನಾಗರಾಜ್, ‘ಕನ್ನಡ ಚಳವಳಿಯ ದಿಕ್ಕು ರೂಪಿಸಿದ ಮ.ರಾಮಮೂರ್ತಿ ಅವರ ಹೆಸರಿನ ಪ್ರಶಸ್ತಿ ದೊರೆತಿರುವುದು ಸಂತೋಷ ತಂದಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.