ADVERTISEMENT

ಕನ್ನಡ ಹೋರಾಟಗಾರರ ವಿರುದ್ಧದ ಪ್ರಕರಣ ವಾಪಸ್‌

ಕನ್ನಡಿಗರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 19:30 IST
Last Updated 14 ಅಕ್ಟೋಬರ್ 2017, 19:30 IST
ಡಾ.ಅಬ್ದುಲ್‌ ಹಮೀದ್‌, ಡಾ.ಹಂಪನಾಗರಾಜಯ್ಯ, ಎಸ್.ಎಸ್.ಪಾಟೀಲ್‌, ಎಸ್‌.ಶಿವರಾಂ, ರಾಮಕೃಷ್ಣ ಉಪಾಧ್ಯಾಯ, ಕೆ.ಎಸ್‌. ಪುಟ್ಟಣ್ಣಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮಾದಾರ ಚೆನ್ನಯ್ಯ ಸ್ವಾಮೀಜಿ ಇದ್ದಾರೆ–ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಕನ್ನಡ ನಾಡು, ನುಡಿ, ಜಲಕ್ಕಾಗಿ ಹೋರಾಟ ನಡೆಸಿದ ಕನ್ನಡಪರ ಹೋರಾಟಗಾರರ ಮೇಲಿರುವ ಎಲ್ಲ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಘೋಷಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡಿಗರ ಸಮಾವೇಶ ಮತ್ತು ಜನಪದ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕನ್ನಡಕ್ಕಾಗಿ ಹೋರಾಡುವಾಗ ಪೊಲೀಸರ ಲಾಠಿ ಏಟು, ಜೈಲು ಶಿಕ್ಷೆ, ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ಎದುರಿಸಬೇಕಾಗುತ್ತದೆ. ಇವೆಲ್ಲದರ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಎದೆಗುಂದದೆ ಹೋರಾಡುತ್ತಿರುವುದು ಶ್ಲಾಘನೀಯ’ ಎಂದರು.

ADVERTISEMENT

‘ಕನ್ನಡಕ್ಕೆ ಪ್ರತ್ಯೇಕ ಬಾವುಟ ಹೊಂದಲೇಬೇಕು. ಇದು ರಾಜ್ಯದ ಆರೂವರೆ ಕೋಟಿ ಜನರ ಒತ್ತಾಸೆಯಾಗಿದೆ’ ಎಂದು  ‍ಪುನರುಚ್ಚರಿಸಿದರು.

ಕೇಂದ್ರ ಸಚಿವ ಅನಂತಕುಮಾರ್‌ ಮಾತನಾಡಿ, ‘ಸಂಸತ್‌ ಅಧಿವೇಶನದ ವೇಳೆ ರಾಜ್ಯದಿಂದ ಸಾಹಿತಿಗಳು, ಕನ್ನಡಪರ ಹೋರಾಟಗಾರರು ದೆಹಲಿಗೆ ನಿಯೋಗ ಬಂದರೆ ಪ್ರಧಾನಿಯ ಗಮನ ಸೆಳೆದು, ನಮ್ಮ ರಾಜ್ಯಕ್ಕೆ ಹೆಚ್ಚಿನ ಅನುದಾನ ತರಲು ಸಾಧ್ಯವಾಗಲಿದೆ’ ಎಂದರು.

*
ಗಡಿ ವಿಚಾರ, ಶಾಸ್ತ್ರೀಯ ಭಾಷೆ, ಕಾವೇರಿ, ಕೃಷ್ಣಾ, ಮಹದಾಯಿ ಜಲ ವಿವಾದಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ನ್ಯಾಯ ಪಡೆಯಲು ರಾಜ್ಯ ಸರ್ಕಾರ ಎಲ್ಲ ರೀತಿಯ ಹೋರಾಟ ನಡೆಸಲಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.