ADVERTISEMENT

ಕಬ್ಬನ್ ಉದ್ಯಾನದಲ್ಲಿ ತಡರಾತ್ರಿ ‘ಪಾರ್ಟಿ’ ನಡೆಸಲು ವಿರೋಧ

​ಪ್ರಜಾವಾಣಿ ವಾರ್ತೆ
Published 18 ಜೂನ್ 2017, 19:53 IST
Last Updated 18 ಜೂನ್ 2017, 19:53 IST
ನಡಿಗೆದಾರರ ಸಂಘದ ಸದಸ್ಯರು ಭಿತ್ತಿಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು
ನಡಿಗೆದಾರರ ಸಂಘದ ಸದಸ್ಯರು ಭಿತ್ತಿಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ತಡ ರಾತ್ರಿವರೆಗೂ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ  ಉದ್ಯಾನದ ನಡಿಗೆದಾರರ ಸಂಘದ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.

‘ದೇಶಿ ಹಾಗೂ ವಿದೇಶಿ ಪ್ರವಾಸಿಗರನ್ನು ಖುಷಿಪಡಿಸಲು ಪ್ರವಾಸೋದ್ಯಮ ಇಲಾಖೆಯು ಉದ್ಯಾನದಲ್ಲಿ ರಾತ್ರಿ ವೇಳೆ ಪಾರ್ಟಿಗಳನ್ನು ಆಯೋಜಿಸಲು ಮುಂದಾಗಿದೆ. ಈ ಸಂಬಂಧ ಅನುಮತಿ ನೀಡುವಂತೆ ಕೋರಿ ಪ್ರಸ್ತಾವ ಸಲ್ಲಿಸಲು ಸಿದ್ಧತೆ ನಡೆಸಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು’ ಎಂದು ನಡಿಗೆದಾರರ ಸಂಘದ ಅಧ್ಯಕ್ಷ ಎಸ್‌. ಉಮೇಶ್ ಆಗ್ರಹಿಸಿದರು.

‘ವಾಣಿಜ್ಯ ಉದ್ದೇಶಕ್ಕೆ ಉದ್ಯಾನದ ಜಾಗ ನೀಡಬಾರದು. ಮೂಲಸೌಕರ್ಯಗಳನ್ನು ಒದಗಿಸಿ ಉದ್ಯಾನದ ಜಾಗದ ಸುತ್ತಲೂ  ತಡೆಗೋಡೆ ನಿರ್ಮಿಸಬೇಕು. ಉದ್ಯಾನಕ್ಕೆ ಬರುವ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ. ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಲು ಸೂಕ್ತ ಭದ್ರತೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಕಲ್ಪಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.