ADVERTISEMENT

ಕಬ್ಬು ದರ: ದಸರಾ ವೇಳೆ ಪ್ರತಿಭಟನೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 19:41 IST
Last Updated 4 ಸೆಪ್ಟೆಂಬರ್ 2013, 19:41 IST

ಬೆಂಗಳೂರು: ಒಂದು ವಾರದೊಳಗಾಗಿ ಕಬ್ಬು ದರ ನಿಗದಿ ಮಾಡದಿದ್ದರೆ, ದಸರಾ ಉತ್ಸವದ ಮೊದಲ ದಿನದಿಂದ ಬೆಂಗಳೂರು-ಮೈಸೂರು ರಸ್ತೆ ತಡೆ ಮಾಡುವ ಮೂಲಕ ಮೊದಲ ಹಂತದ ಪ್ರತಿಭಟನೆಯನ್ನು ಪ್ರಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಶೇ 9.5 ಇಳುವರಿಯನ್ನು ಆಧಾರವಾಗಿಟ್ಟುಕೊಂಡು ಬೆಲೆ ನಿಗದಿ ಮಾಡಲಾಗುತ್ತದೆ. ಅದರಂತೆಯೇ ರಾಜ್ಯದಲ್ಲೂ ಶೇ 9.5 ಇಳುವರಿಯನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಬೆಲೆ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.