ADVERTISEMENT

ಕಮಲಾ ಹಂಪನಾಗೆ ಅಹಿಂಸಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 19:59 IST
Last Updated 24 ಡಿಸೆಂಬರ್ 2012, 19:59 IST

ಬೆಂಗಳೂರು: ನವದೆಹಲಿಯ ಅಹಿಂಸಾ ಇಂಟರ್‌ನ್ಯಾಷನಲ್ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ `ಅಹಿಂಸಾ ಇಂಟರ್‌ನ್ಯಾಷನಲ್ ಪ್ರಶಸ್ತಿ'ಗೆ  ಹಿರಿಯ ಸಾಹಿತಿ ನಾಡೋಜ ಪ್ರೊ.ಕಮಲಾ ಹಂಪನಾ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತೀಯ ಸಾಹಿತ್ಯ, ಸಂಸ್ಕೃತಿ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 30 ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.