ADVERTISEMENT

ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧಕ್ರಮ

​ಪ್ರಜಾವಾಣಿ ವಾರ್ತೆ
Published 8 ಮೇ 2012, 19:30 IST
Last Updated 8 ಮೇ 2012, 19:30 IST

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ಎಂಟು ವಲಯಗಳ ವ್ಯಾಪ್ತಿಯ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಆಯುಕ್ತರಿಗೆ ಶಿಫಾರಸು ಮಾಡಲಾಗುವುದು ಎಂದು ಮೇಯರ್ ಡಿ. ವೆಂಕಟೇಶಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯ ನಾಗರಿಕ ಸೇವಾ ಕೇಂದ್ರ, ನಿಯಂತ್ರಣ ಕೊಠಡಿ, ಲೆಕ್ಕಪತ್ರಗಳ ವಿಭಾಗ ಹಾಗೂ ಆಡಳಿತ ವಿಭಾಗಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಹಾಜರಾತಿ ಪುಸ್ತಕ ಪರಿಶೀಲಿಸಿದ ಅವರು, ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ಕೆಂಡಾಮಂಡಲವಾದರು. ಅಲ್ಲದೆ, ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಹೆಚ್ಚುವರಿ ಆಯುಕ್ತರಿಗೆ (ಆಡಳಿತ) ಸೂಚನೆ ನೀಡಿದರು.

ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು. ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.