ನೆಲಮಂಗಲ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ ಎಂದು ಪಾಲಿಕೆ ಸದಸ್ಯ ಶಿವಕುಮಾರ್ ತಿಳಿಸಿದರು.
ಪಟ್ಟಣದ ವಿಶಾಲ್ ಆಂಗ್ಲಶಾಲೆ ಏರ್ಪಡಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು ಎಂದು ಶಿಕ್ಷಕರಿಗೆ ಮತ್ತು ಪೋಷಕರಿಗೆ ಸೂಚಿಸಿದರು.
ಶಾಲಾ ಸಂಸ್ಥಾಪಕ ಟಿ.ಕೆ.ನರಸೇಗೌಡ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. ಪಾಲಿಕೆ ಸದಸ್ಯ ಎನ್.ಎಸ್.ಮೂರ್ತಿ, ಎ.ಟಿ.ರಾಜು, ಅಸ್ಮತ್ ಉನ್ನಿಸಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.