ಬೆಂಗಳೂರು: ಕೆ.ಆರ್.ಮಾರುಕಟ್ಟೆ ಸುರಂಗ ಮಾರ್ಗದ ಮೆಟ್ರೊ ನಿಲ್ದಾಣದ ಮೇಲ್ಚಾವಣಿಯ ಎಂಟು ಶೀಟ್ಗಳು ರಾತ್ರಿ 10.30ರ ಸುಮಾರಿಗೆ ಕಳಚಿ ಬಿದ್ದಿವೆ.
ಪ್ರಯಾಣಿಕರ ಓಡಾಟ ಕಡಿಮೆ ಇದ್ದ ವೇಳೆ ಈ ಅವಘಡ ಸಂಭವಿಸಿದ್ದರಿಂದ ಯಾವುದೇ ಅಪಾಯವಾಗಿಲ್ಲ. ಫ್ಲಾಟ್ಫಾರಂಗೆ ಹೋಗುವ ಮಾರ್ಗದ ಮೆಟ್ಟಿಲುಗಳು ಹಾಗೂ ಎಸ್ಕಲೇಟರ್ ಮೇಲೆ ಶೀಟ್ಗಳು ಬಿದ್ದಿವೆ.
ಮುನ್ನೆಚ್ಚರಿಕಾ ಕ್ರಮವಾಗಿ ನಿಲ್ದಾಣ ಪ್ರವೇಶವನ್ನು ಸಿಬ್ಬಂದಿ ಬಂದ್ ಮಾಡಿದ್ದಾರೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.