ADVERTISEMENT

ಕಳಪೆ ಕಾಮಗಾರಿ: ದೂರು ನೀಡಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ರಾಜರಾಜೇಶ್ವರಿ ನಗರ: `ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಿಗಾ ಇರಿಸಬೇಕು. ಕಳಪೆ ಕಾಮಗಾರಿ ಎಂದು ಕಂಡು ಬಂದರೆ ಕೂಡಲೇ ದೂರು ನೀಡಬೇಕು~ ಎಂದು ಗೃಹ ಸಚಿವ ಆರ್.ಅಶೋಕ ಹೇಳಿದರು.

 ಚಿಕ್ಕಲ್ಲಸಂದ್ರ ವಾರ್ಡ್ ವ್ಯಾಪ್ತಿಯ ಹನುಮಗಿರಿ ನಗರದಲ್ಲಿ 1.42 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಚರಂಡಿಗಳ ಸ್ವಚ್ಛತಾ ಕಾರ್ಯ ಮತ್ತು ಕಲ್ಲುಚಪ್ಪಡಿ ಹೊದಿಕೆ ಹಾಕುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಥಳೀಯ ಪಾಲಿಕೆ ಸದಸ್ಯ ಬಿ.ಎಸ್.ವೆಂಕಟಸ್ವಾಮಿ ನಾಯ್ಡು ಮಾತನಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರದ ಕಾರ್ಯಕ್ರಮಗಳು ವಿಫಲವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಾಲಿಕೆ ಸದಸ್ಯರಾದ ಎಚ್.ನಾರಾಯಣ್, ಶ್ರೀನಿವಾಸ್, ಕಾರ್ಯಪಾಲಕ ಎಂಜಿನಿಯರ್ ಶ್ರೀಕಂಠಯ್ಯ ಗೌಡ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಪಿ.ಮಹದೇವಯ್ಯ, ಸಹಾಯಕ ಎಂಜಿನಿಯರ್ ಲಿಂಗೇಗೌಡ ಮತ್ತಿತರರು ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.