ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶ ಗೌಡ, ಕಸಾಪ ಕೇಂದ್ರ ಚುನಾವಣಾ ಅಧಿಕಾರಿ ಎಸ್.ಟಿ. ಮೋಹನ ರಾಜು ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಡಾ. ದೊಡ್ಡರಂಗೇಗೌಡ, ಮರಿತಿಬ್ಬೇಗೌಡ, ಶಾಸಕ ಎಂ. ಶ್ರೀನಿವಾಸ್, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಶ್ರೀಕಂಠೇಗೌಡ, ಬಿಬಿಎಂಪಿ ಸದಸ್ಯ ವಿ. ವಾಗೀಶ್, ಮೋಹನ್ ಕುಮಾರ್, ಸಾಹಿತಿಗಳಾದ ಡಾ. ರಂಗಾರೆಡ್ಡಿ ಕೋಡಿರಾಮಪುರ, ಪ್ರೊ.ಎಂ.ಜಿ. ಚಂದ್ರಶೇಖರಯ್ಯ, ಡಾ. ಲಿಂಗರಾಜಯ್ಯ ಮತ್ತಿತರರು ಈ ಸಂದರ್ಭದಲ್ಲಿ ಜಯಪ್ರಕಾಶ ಗೌಡರ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.