ADVERTISEMENT

ಕಸ ಗುತ್ತಿಗೆದಾರರನ್ನು ಹೊರ ಹಾಕಿ: ಹೈಕೋರ್ಟ್

ಪಾಲಿಕೆ ಆಯುಕ್ತರು ಅಸಹಾಯಕರೇ?

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2013, 19:59 IST
Last Updated 20 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ‘ಪಟ್ಟಭದ್ರ ಹಿತಾಸಕ್ತಿಗಳು ನಗರದ ತ್ಯಾಜ್ಯ ವಿಲೇವಾರಿ ಗುತ್ತಿಗೆ ತೆಗೆದುಕೊಂಡಂತಿದೆ. ಅವರನ್ನು ನಿಯಂತ್ರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ಅಸಹಾಯಕರಾಗಿದ್ದಾ ರೆಯೇ? ಅಥವಾ ಗುತ್ತಿಗೆದಾರರೇ ಆಯುಕ್ತರನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾ ರೆಯೇ?’ ಎಂದು ಹೈಕೋರ್ಟ್‌ ಶುಕ್ರವಾರ ಪ್ರಶ್ನಿಸಿತು.

ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಎನ್‌. ಕುಮಾರ್‌ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ರೀತಿ ಪ್ರಶ್ನಿಸಿತು.

‘ತ್ಯಾಜ್ಯ ವಿಲೇವಾರಿ ಗುತ್ತಿಗೆ ವಹಿಸಿಕೊಂಡಿರುವ ಪಟ್ಟಭದ್ರ ಹಿತಾಸಕ್ತಿಗಳನ್ನು ಹೊರಹಾಕಿದರೆ, ಈ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ಸಾರ್ವಜನಿಕರ ಹಿತ ಕಾಯುವ ಇರಾದೆ ಪಾಲಿಕೆಗೆ ಇದ್ದರೆ, ಮೊದಲು ಈ ಕೆಲಸ ಮಾಡಲಿ’ ಎಂದು ಪೀಠ, ಮೌಖಿಕ ವಾಗಿ ತಾಕೀತು ಮಾಡಿತು.

ಎಲ್ಲೆಂದರಲ್ಲಿ ಕಸ ಬಿಸಾಡಿದವರಿಂದ ದಂಡ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು ರೂ 1.98 ಲಕ್ಷ ಸಂಗ್ರಹ ಆಗಿದೆ ಎಂದು ಬಿಬಿಎಂಪಿ ಪರ ವಕೀಲರು ಪೀಠಕ್ಕೆ ತಿಳಿಸಿದರು. ಅರ್ಜಿಯ ವಿಚಾರಣೆ ಮುಂದೂಡ ಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.