ADVERTISEMENT

ಕಸ ವಿಂಗಡಣೆ ಬಗ್ಗೆ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 18:30 IST
Last Updated 5 ಅಕ್ಟೋಬರ್ 2012, 18:30 IST

ಕೃಷ್ಣರಾಜಪುರ: `ಮನೆಯಲ್ಲಿಯೇ ಕಸ ವಿಂಗಡಣೆ ಮಾಡುವ ಬಗ್ಗೆ ಅರಿವು ಮೂಡಿಸಿರುವ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಾಥಾ ನಡೆಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲು ಪ್ರಯತ್ನ ನಡೆಸಲಾಗಿದೆ~ ಎಂದು ಬಿಬಿಎಂಪಿ ಸದಸ್ಯೆ ತೇಜಸ್ವಿನಿ ತಿಳಿಸಿದರು.

ಬಾಬೂಸಾಪಾಳ್ಯದಲ್ಲಿ ಏರ್ಪಡಿಸಿದ್ದ ಕಸ ವಿಂಗಡಣೆ ಬಗ್ಗೆ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಸಿ ಮತ್ತು ಒಣ ಕಸಗಳನ್ನು ವಿಂಗಡಿಸುವುದರ ಮೂಲಕ ಪರಿಸರ ರಕ್ಷಣೆ ಮನೆಯಿಂದಲೇ ಆಗಬೇಕು. ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವಲ್ಲಿ ನಿವಾಸಿಗಳು ಪಾಲುದಾರರಾಗಬೇಕು. ವಿಂಗಡಿಸಿದ ಕಸವನ್ನು ಆಟೊ, ತಳ್ಳು ಬಂಡಿ ಅಥವಾ ವಾಹನಗಳ ಸಿಬ್ಬಂದಿಗೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪರಿಸರ ಅಧಿಕಾರಿ ನಾಗಭೂಷಣ್, ಆರೋಗ್ಯ ಇನ್ಸ್‌ಪೆಕ್ಟರ್ ಸಂಜಯ್ ಕುಮಾರ್ ಮತ್ತಿತರು ಜಾಥಾದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.