ADVERTISEMENT

ಕಾಂಗ್ರೆಸ್ ಕಾರ್ಯಕರ್ತರಿಂದ ಪುಂಡಾಟಿಕೆ: ಆರೋಪ

​ಪ್ರಜಾವಾಣಿ ವಾರ್ತೆ
Published 4 ಮೇ 2018, 21:15 IST
Last Updated 4 ಮೇ 2018, 21:15 IST
ಬಿಬಿಎಂಪಿ ಕಚೇರಿ ಎದುರು ಜೆಡಿಎಸ್ ಅಭ್ಯರ್ಥಿ ಡಿ.ಎ.ಗೋಪಾಲ್ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಕಚೇರಿ ಎದುರು ಜೆಡಿಎಸ್ ಅಭ್ಯರ್ಥಿ ಡಿ.ಎ.ಗೋಪಾಲ್ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಅಡ್ಡಗಾಲು ಹಾಕಿ ಜೀವ ಬೆದರಿಕೆಯೊಡ್ಡುವ ಮೂಲಕ ಪುಂಡಾಟಿಕೆ ಮೆರೆಯುತ್ತಿದ್ದಾರೆ ಎಂದು ಆರೋಪಿಸಿ ಇಲ್ಲಿನ ಬಿಬಿಎಂಪಿ ಕಚೇರಿ ಎದುರು ಜೆಡಿಎಸ್ ಅಭ್ಯರ್ಥಿ ಡಿ.ಎ.ಗೋಪಾಲ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟಿಸಿದರು.

ಡಿ.ಎ.ಗೋಪಾಲ್ ಮಾತನಾಡಿ, ‘ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ನೇರ ಕಾರಣ. ಕೆ.ಆರ್.ಪುರ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಕಾರ್ಯಕರ್ತರ ಅಟ್ಟಹಾಸ ಮುಂದುವರೆದಿದೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯರು ಮತ್ತು ಕಾರ್ಯಕರ್ತರು ನಿರಂತರ ಬೆದರಿಕೆ, ದಬ್ಬಾಳಿಕೆ ಹಾಕಿ ನಮ್ಮ ಮೇಲೆ ಪುಂಡಾಟಿಕೆ ಮೆರೆಯುತ್ತಿದ್ದಾರೆ’ ಎಂದು ಅವರು ದೂರಿದರು.

ಗುರುವಾರ ಎಚ್‌ಎಎಲ್ ವಾರ್ಡ್‌ನ ನಲ್ಲೂರುಪುರದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕೆಂದು ಅಗ್ರಹಿಸಿದರು.

ADVERTISEMENT

ಜೆಡಿಎಸ್ ಕಾರ್ಯಕರ್ತರಿಗೆ ಭದ್ರತೆ ಒದಗಿಸುವ ಕುರಿತು ಚುನಾವಣಾ ಅಧಿಕಾರಿಗಳು ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.