ADVERTISEMENT

ಕಾಂಗ್ರೆಸ್‌ ಕಾರ್ಯಕರ್ತರಿಗೆ ಚೂರಿ ಇರಿತ

​ಪ್ರಜಾವಾಣಿ ವಾರ್ತೆ
Published 15 ಮೇ 2018, 19:10 IST
Last Updated 15 ಮೇ 2018, 19:10 IST

ಹೊನ್ನಾಳಿ: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಇಬ್ಬರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಿಡಿಗೇಡಿಗಳು ಚೂರಿಯಿಂದ ಇರಿದಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ.

ಗಾಯಗೊಂಡ ಸಿದ್ದೇಶ್‌, ಗುಡ್ಡಜ್ಜಿ ರಾಜು ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಹಿನ್ನೆಲೆ: ಬಿಜೆಪಿ ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ನಿವಾಸದ ಮುಂದೆ ಕೆಲವರು ಪಟಾಕಿ ಸಿಡಿಸಿದ್ದಾರೆ. ಎಚ್.ಬಿ. ಅಣ್ಣಪ್ಪ ಅವರ ವಾಣಿಜ್ಯ ಮಳಿಗೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ADVERTISEMENT

ಇದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪಿಎಸ್ಐ ಎನ್.ಸಿ.ಕಾಡದೇವರ ಮಠ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.