ADVERTISEMENT

ಕಾಂಗ್ರೆಸ್ ನಡಿಗೆ: ಕಾಗೋಡು ತಿಮ್ಮಪ್ಪ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 9 ಜೂನ್ 2011, 19:30 IST
Last Updated 9 ಜೂನ್ 2011, 19:30 IST

ಬೆಂಗಳೂರು: ಕೆಪಿಸಿಸಿ ಹಮ್ಮಿಕೊಂಡಿರುವ `ಕಾಂಗ್ರೆಸ್ ನಡಿಗೆ-ಜನರ ಬಳಿಗೆ~ ಕಾರ್ಯಕ್ರಮದ ಉಸ್ತುವಾರಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ಸಂಯೋಜನಾ ಸಮಿತಿ ರಚಿಸಲಾಗಿದೆ. 15 ಸದಸ್ಯರ ಈ ಸಮಿತಿ ರಾಜ್ಯವ್ಯಾಪಿ ನಡೆಯುವ ಕಾರ್ಯಕ್ರಮದ ಉಸ್ತುವಾರಿ ವಹಿಸಲಿದೆ.

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ವಿ.ಆರ್.ಸುದರ್ಶನ್, ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಬಿ.ಎ.ಮೊಯಿದ್ದೀನ್, ಶಾಸಕರಾದ ಬಿ.ಸಿ.ಪಾಟೀಲ್, ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಎಸ್.ಜಿ.ನಂಜಯ್ಯನಮಠ, ಮಹಿಮಾ ಪಟೇಲ್, ಎಚ್.ಆಂಜನೇಯ, ಕೆಪಿಸಿಸಿ ಸದಸ್ಯ ಡಾ.ಲೋಹಿತ್ ನಾಯ್ಕರ್, ವೀಣಾ ಅಚ್ಚಯ್ಯ, ಶೋಭಾ ನಾಯಕ್, ಪುಷ್ಪವಲ್ಲಿ ಅವರನ್ನು ಸಮಿತಿಯ ಸದಸ್ಯರಾಗಿ ಹಾಗೂ ಕೆಪಿಸಿಸಿ ಸದಸ್ಯ ಸಿ.ಆರ್.ನಾರಾಯಣಪ್ಪ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.
 
`ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ಸಮಿತಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜೂನ್ 15ರಿಂದ ಆಗಸ್ಟ್ 14ರವರೆಗೆ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ `ಕಾಂಗ್ರೆಸ್ ನಡಿಗೆ-ಜನರ ಬಳಿಗೆ~ ಆಂದೋಲನ ನಡೆಯಲಿದೆ~ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.