ADVERTISEMENT

ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ವಿಳಂಬ ಸಂಭವ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2018, 20:31 IST
Last Updated 4 ಮಾರ್ಚ್ 2018, 20:31 IST

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ವಿಳಂಬವಾಗಲಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಮಾರ್ಚ್‌ 15ರ ಒಳಗೆ ಪ್ರಣಾಳಿಕೆ ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಪಕ್ಷದ ಪ್ರಮುಖ ನಾಯಕರು ತಿಂಗಳಿಡೀ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ, ಏಪ್ರಿಲ್‌ ಮೊದಲ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ.

ಇದೇ 16ರಿಂದ ಮೂರು ದಿನ ದೆಹಲಿಯಲ್ಲಿ ಎಐಸಿಸಿ ಅಧಿವೇಶನ ನಡೆಯಲಿದ್ದು, ರಾಜ್ಯದ ಪ್ರಮುಖ ನಾಯಕರು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. 21 ಮತ್ತು 22ರಂದು ಕರಾವಳಿ ಭಾಗದಲ್ಲಿ ರಾಹುಲ್‌ ಗಾಂಧಿ ಪಕ್ಷದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ 23ರಂದು ಚುನಾವಣೆ ನಡೆಯಲಿದೆ. 24 ಮತ್ತು 25ರಂದು ಮತ್ತೆ ಮೈಸೂರು ಭಾಗದಲ್ಲಿ ರಾಹುಲ್‌ ಪ್ರವಾಸ ನಿಗದಿಯಾಗಿದೆ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.