ಬೆಂಗಳೂರು: ಕಾಂಗ್ರೆಸ್ ಸೇರುವುದಾಗಿ ಹಬ್ಬಿರುವ ವದಂತಿಯನ್ನು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಅಲ್ಲಗಳೆದಿದ್ದಾರೆ.
`ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನನ್ನ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅಂತಹ ಯಾವ ಯೋಚನೆಯೂ ನನಗಿಲ್ಲ. ಬೆಂಗಳೂರಿನ ವಿಜಯನಗರ ಅಥವಾ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಅದು ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.