ನೆಲಮಂಗಲ: ಬೆಂಗಳೂರಿನಿಂದ ನೆಲಮಂಗಲಕ್ಕೆ ರೈಲು ಸೇವೆ ಆರಂಭಿಸಿದ್ದರೂ ಕಾಟಾಚಾರದಿಂದ ಕೂಡಿದೆ ಎಂದು ಆರೋಪಿಸಿ ಮಾಜಿ ಸಚಿವ ಅಂಜನಾಮೂರ್ತಿ ಅವರು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.
`ರೈಲಿನ ಸಂಚಾರ ವೇಳೆಯನ್ನು ಬದಲಿಸಲು, ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮೂರು- ನಾಲ್ಕು ಬಾರಿ ಸಂಚರಿಸಲು ವ್ಯವಸ್ಥೆ ಮಾಡಬೇಕು. ಮಧ್ಯಾಹ್ನ 2.30ಕ್ಕೆ ಒಂದು ಟ್ರಿಪ್ ಸಂಚರಿಸುವುದರಿಂದ ನೌಕರ ವರ್ಗಕ್ಕೆ ಸಾರ್ವಜನಿಕರಿಗೆ ಪ್ರಯೋಜನವಿಲ್ಲ' ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8.30ಕ್ಕೆ ನೆಲಮಂಗಲದಿಂದ ಹೊರಡುವಂತೆ, ಸಂಜೆ 6.30ಕ್ಕೆ ಬೆಂಗಳೂರಿನಿಂದ ರೈಲು ಹೊರಡುವ ವ್ಯವಸ್ಥೆ ಮಾಡಬೇಕು ಎಂದು ಅವರು ವಿನಂತಿಸಿದ್ದಾರೆ.
ಸ್ವಯಂ ಉದ್ಯೋಗಕ್ಕೆ ಸಹಾಯಧನ: ಪ್ರಧಾನಮಂತ್ರಿ ಉದ್ಯೋಗ ಸ್ವಜನ ಯೋಜನೆ ಅಡಿ ನಿರುದ್ಯೋಗಿ ಯುವಕರಿಗೆ ಕೈಗಾರಿಕೆ ಆರಂಭಿಸಲು ಬ್ಯಾಂಕ್‌ಗಳಿಂದ 25 ಲಕ್ಷದ ವರೆಗೆ ಸಾಲ ನೀಡಲಾಗುವುದು.
18 ವರ್ಷಕ್ಕಿಂತ ಹೆಚ್ಚಿನ ಪ್ರಾಯದ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದು ಎಂದು ಸ್ಥಳೀಯ ಕುಶಲಕರ್ಮಿ ತರಬೇತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಲ್ಲೂಕಿನ ನಿರುದ್ಯೋಗಿ ಯುವಕರು ಜೂನ್ 30ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರಿಗೆ ಅರ್ಜಿ ಸಲ್ಲಿಸಬಹುದು. ಸಂಪರ್ಕಕ್ಕಾಗಿ 080-23142152.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.