ನೆಲಮಂಗಲ: ಮಹಿಳೆಯರಿಗೆ ಕಾನೂನಿನ ಅರಿವು ಇದ್ದರೆ ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿ ಅವುಗಳನ್ನು ಚಲಾಯಿಸಬಹುದು ಎಂದು ತಾ.ಪಂ. ಉಪಾಧ್ಯಕ್ಷೆ ಅಶ್ವತ್ಥಮ್ಮ ತಿಳಿಸಿದರು.
ಕಲಾಗಂಗಾ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯು ಮನೋಜ್ಞ ಸಂಸ್ಥೆಯ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪ್ರಿಯದರ್ಶಿನಿ ಕಾಲೇಜಿನ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ‘ಮಹಿಳೆಯರಿಗೆ ಕಾನೂನಿನ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲೆ ರೇಣುಮ್ಮ ಉಪನ್ಯಾಸ ನೀಡಿ ಮಹಿಳೆಯರು ತಮ್ಮ ಕಾನೂನುಗಳನ್ನು ತಿಳಿದರೆ ಶೋಷಣೆಗಳ ವಿರುದ್ಧ ಕಾನೂನುಬದ್ಧವಾಗಿ ಹೋರಾಡಬಹುದು, ಬಹಳಷ್ಟು ಮಹಿಳೆಯರು ಕಾನೂನಿನ ಸಹಾಯ ಪಡೆಯಲು ಹಿಂಜರಿಯುತ್ತಿದ್ದಾರೆ. ಇದು ಹೋಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಳಿನಾ ಕಾಗಿನೆಲೆ ಮಾತನಾಡಿ ಮಹಿಳೆಯರಿಗೆ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ವತಿಯಿಂದ ಇರುವ ಸೌಲಭ್ಯಗಳನ್ನು ವಿವರಿಸಿದರು.
ರಂಗ ಶಿಕ್ಷಣ ಕೇಂದ್ರದ ವ್ಯವಸ್ಥಾಪಕಿ ಮಂಜುಳಾ ಸಿದ್ದರಾಜು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೃತಿ ಗೌಡ, ಬಿಜೆಪಿ ಮಹಿಳಾ ಮೋರ್ಚಾದ ಮೋಹನ್ ಕುಮಾರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.