ADVERTISEMENT

ಕಾಮಗಾರಿಗೆ ₹10 ಕೋಟಿ ವೆಚ್ಚ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 19:30 IST
Last Updated 17 ಅಕ್ಟೋಬರ್ 2017, 19:30 IST

ಬೆಂಗಳೂರು: ನಗರೋತ್ಥಾನ ಅನುದಾನದಡಿ ಯಲಹಂಕ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಎಂ.ವೀರಪ್ಪ ಮೊಯಿಲಿ ರಾಮಗೊಂಡನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದರು.

ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್‌ ರಸ್ತೆ, ಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ‘ಒಂದು ತಿಂಗಳ ಹಿಂದೆ ನಗರೋತ್ಥಾನ ಅನುದಾನದಡಿಯಲ್ಲಿ ವಿವಿಧ ಕಾಮಗಾರಿ
ಗಳಿಗಾಗಿ ₹20 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ ಕೆಲವು ಕಾಮಗಾರಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಜತೆಗೆ ಚರ್ಚಿಸಿ, ಹೆಚ್ಚುವರಿಯಾಗಿ ₹10 ಕೋಟಿ ಅನುದಾನ ಬಿಡುಗಡೆ ಮಾಡಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.