ADVERTISEMENT

ಕಾಮಗಾರಿ ಚುರುಕು: ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2014, 19:30 IST
Last Updated 3 ಜನವರಿ 2014, 19:30 IST

ಬೆಂಗಳೂರು: ಮಡಿವಾಳ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಇತ್ತೀಚೆಗೆ ವಾಹನ ದಟ್ಟಣೆ ಹೆಚ್ಚಾಗಿದ್ದು, ರಸ್ತೆ ವಿಸ್ತರಣೆ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಪಾಲಿಕೆ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಮೇಯರ್‌ ಬಿ.ಎಸ್. ಸತ್ಯನಾರಾಯಣ ಮತ್ತು ಆಯುಕ್ತ ಎಂ.ಲಕ್ಷ್ಮೀನಾರಾಯಣ ಅವರೊಂದಿಗೆ ಬಿ.ಟಿ.ಎಂ. ಬಡಾವಣೆ, ಮಡಿವಾಳ ಟ್ಯಾಂಕ್ ಬಂಡ್ ರಸ್ತೆ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್‌ನ ಪ್ರದೇಶದಲ್ಲಿ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ ನಿರ್ವಹಣೆ ಇಲ್ಲದೆ ಬಹಳ ಕೆಟ್ಟದಾಗಿ ಕಾಣಿಸುತ್ತಿದೆ. ಇದೊಂದು ಪ್ರಮುಖ ಜಂಕ್ಷನ್ ಆಗಿದ್ದು, ದೇಶ ವಿದೇಶದಿಂದ ಗಣ್ಯವ್ಯಕ್ತಿಗಳು ಬರುತ್ತಾರೆ. ಜಂಕ್ಷನ್‌್ ಸುಂದರಗೊಳಿಸುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಡಿವಾಳ ಟ್ಯಾಂಕ್ ಬಂಡ್ ರಸ್ತೆಗೆ ಭೇಟಿ ನೀಡಿದ ಅವರು, ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ರಸ್ತೆ ವಿಸ್ತರಣೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.


ಶಾಸಕ ಎಂ.ಸತೀಶ್ ರೆಡ್ಡಿ, ವಿರೋಧ ಪಕ್ಷದ ನಾಯಕ ಬಿ.ಎನ್. ಮಂಜುನಾಥ ರೆಡ್ಡಿ, ಪಾಲಿಕೆ ಸದಸ್ಯ ಎ.ಎನ್. ಪುರುಷೋತ್ತಮ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT