ಪೀಣ್ಯ ದಾಸರಹಳ್ಳಿ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಔಮ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾರ್ಮಿಕರು ಕಾರ್ಖಾನೆ ಮುಂದೆ ಶನಿವಾರ ಪ್ರತಿಭಟಿಸಿದರು.
‘ವಿನಾ ಕಾರಣ ಆರೋಪವನ್ನು ಹೊರಿಸಿ ಒಂಬತ್ತು ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿ ಒಪ್ಪಂದವನ್ನು ಉಲ್ಲಂಘಿಸಲಾಗಿದೆ. ಸಂಘದ ಸದಸ್ಯರ ವಿರುದ್ಧ ಆಧಾರ ರಹಿತ ಆರೋಪ ಹೊರಿಸಿ ನೋಟಿಸ್ ನೀಡುವುದನ್ನು ಕೈಬಿಟ್ಟು ಮಾತುಕತೆಗೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.