
ಪ್ರಜಾವಾಣಿ ವಾರ್ತೆಬೆಂಗಳೂರು: ‘ರಾಜ್ಯದಲ್ಲಿ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶಾಶ್ವತ ವಸತಿ ವ್ಯವಸ್ಥೆಯನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಯದರ್ಶಿ ಕವಿತಾ ಅವರು ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ಧ ಉಡುಪು ತಯಾರಿಕೆ, ಹೋಟೆಲ್, ಮನೆಗೆಲಸ ಸೇರಿದಂತೆ ಹಲವು ಅಸಂಘಟಿತ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಶೇ 90ರಷ್ಟು ಮಹಿಳಾ ಕಾರ್ಮಿಕರಿದ್ದಾರೆ. ಬರುವ ಸಂಬಳದಲ್ಲಿ ಶೇ 50ರಷ್ಟು ಮನೆ ಬಾಡಿಗೆಗೆ ಖರ್ಚಾಗುತ್ತದೆ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.