ADVERTISEMENT

ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 19:30 IST
Last Updated 23 ಮಾರ್ಚ್ 2011, 19:30 IST

ಬೆಂಗಳೂರು: ಮಾಡಿಕೊಳ್ಳಲು ಎಂ.ಎಸ್.ರಾಮಯ್ಯ ಕಾಲೇಜಿನ ಆಡಳಿತ ಮಂಡಳಿಯೇ ಹೊಣೆ ಎಂದು ವಿದ್ಯಾರ್ಥಿಗಳು ಕಾಲೇಜಿನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಕಾಲೇಜಿನಿಂದ ಅಮಾನತು ಮಾಡಿದ್ದರಿಂದ ಬೇಸತ್ತ ದುರ್ಗಿ ಶಿಖಾವತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾಲೇಜಿನ ಆಡಳಿತ ಮಂಡಳಿಯೇ ಹೊಣೆ ಎಂದು ವಿದ್ಯಾರ್ಥಿಗಳು ದೂರಿದರು.

ಮೂರು ತಿಂಗಳ ಹಿಂದೆ ನಡೆದ ಪರೀಕ್ಷೆಯಲ್ಲಿ ದುರ್ಗಿ ಅವರು ನಕಲು ಮಾಡಿದ್ದರು ಎಂದು ಅಮಾನತು ಮಾಡಲಾಗಿತ್ತು.  ಅವರು ತಪ್ಪು ಮಾಡಿದ್ದರೆ ಆಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಪರೀಕ್ಷೆ ಮುಗಿದು ಅದರ ಫಲಿತಾಂಶವೂ ಬಂದಿದೆ. ಈಗ ಅವರ ವಿರುದ್ಧ ಆರೋಪ ಹೊರಿಸಿ ಅಮಾನತು ಮಾಡಿದ್ದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಕಾಲೇಜಿನಿಂದ ಅಮಾನತು ಮಾಡಿದ್ದರಿಂದ ಬೇಸತ್ತ ದುರ್ಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿರುವ ಅವರ ತಂದೆ ಹನುಮಾನ್ ಶಿಖಾವತ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.

 ಅವರು ನಗರಕ್ಕೆ ಬಂದು ದೂರು ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಜಯನಗರ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ ಮೂಲದ ದುರ್ಗಿ ಶಿಖಾವತ್ ಅವರು ಎಂ.ಬಿ.ಬಿ.ಎಸ್ ಎರಡನೇ ವರ್ಷದಲ್ಲಿ ಓದುತ್ತಿದ್ದರು, ಅವರು ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ನೆಲೆಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.