ADVERTISEMENT

ಕಾವೇರಿ ನೀರು ಹಂಚಿಕೆ: ನಾಳೆ ದೆಹಲಿಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 20:10 IST
Last Updated 14 ಮಾರ್ಚ್ 2018, 20:10 IST

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಫೆ.16ರಂದು ನೀಡಿದ್ದ ತೀರ್ಪಿನ ಕುರಿತು ಚರ್ಚಿಸಲು ರಾಜ್ಯದ ಎಲ್ಲ ಸಂಸತ್ ಸದಸ್ಯರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇದೇ 16ರಂದು ಕರೆದಿದ್ದಾರೆ.

16ರಿಂದ ಮೂರು ದಿನ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಾತ್ರಿ ತೆರಳಲಿದ್ದಾರೆ. ಮೊದಲ ದಿನವೇ ಸಂಜೆ ಸಭೆ ನಡೆಸಲು ಉದ್ದೇಶಿಸಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸದಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಕರ್ನಾಟಕ‌ಕ್ಕೆ 14.75 ಟಿಎಂಸಿ ಅಡಿ ಹೆಚ್ಚುವರಿ ನೀರು ಹಂಚಿಕೆ ಮಾಡಿ, ತಮಿಳನಾಡಿಗೆ ನೀರನ್ನು ಕಡಿತಗೊಳಿಸಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.