ADVERTISEMENT

ಕಾವೇರಿ: ಸಿಎಂ ನಿವಾಸದ ಎದುರು ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2012, 19:59 IST
Last Updated 7 ಡಿಸೆಂಬರ್ 2012, 19:59 IST

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ನಿವಾಸದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಬರ ಆವರಿಸಿದ್ದು, ಜನ ಕುಡಿಯಲೂ ನೀರಿಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದು ಖಂಡನೀಯ. ಆದ್ದರಿಂದ ಜಗದೀಶ ಶೆಟ್ಟರ್ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಿಗಿ ಭದ್ರತೆ: ವಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ತಮಿಳು ಸಿನಿಮಾ ಪ್ರದರ್ಶನವಾಗುತ್ತಿರುವ ಚಿತ್ರಮಂದಿರಗಳ ಬಳಿ ಸಿಬ್ಬಂದಿ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.