ಬೆಂಗಳೂರು: ಕಿದ್ವಾಯಿ ಆಸ್ಪತ್ರೆಯ ನ್ಯೂಕ್ಲಿಯರ್ ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ.ಪರಮೇಶ್ವರ್ (59) ಕಾಣೆಯಾಗಿದ್ದಾರೆಂದು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
`ಶನಿವಾರ ಸಂಜೆ ಆರು ಗಂಟೆಯ ಸಮಯದಲ್ಲಿ ದಂತ ವೈದ್ಯರನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಹೋದ ಅವರು ಹಿಂದಿರುಗಿ ಬಂದಿಲ್ಲ~ ಎಂದು ಪರಮೇಶ್ವರ್ ಅವರ ಪತ್ನಿ ಡಾ.ಜಾನೆಟ್ ಪರಮೇಶ್ವರ್ ಭಾನುವಾರ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
`ಸಂಜೆ ಆರು ಗಂಟೆಗೆ ಮನೆಯಿಂದ ಹೋಗಿದ್ದಾರೆ. ರಾತ್ರಿ 9.30ಕ್ಕೆ ಫೋನ್ ಮಾಡಿದಾಗ ತಡವಾಗಿ ಬರುತ್ತೇನೆ ಎಂದರು. ಆದರೆ, ರಾತ್ರಿ 11 ಗಂಟೆಗೆ ಫೋನ್ ಮಾಡಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬೆಳಿಗ್ಗೆ ಸಂಬಂಧಿಕರ ಮನೆಯಲ್ಲಿ ವಿಚಾರಿಸಿದರೂ ಅವರ ಸುಳಿವು ಸಿಕ್ಕಿಲ್ಲ. ಅವರು ಯಾರೊಂದಿಗೂ ವೈಮನಸ್ಸು ಹೊಂದಿರಲಿಲ್ಲ~ ಎಂದು ಅವರ ಪತ್ನಿ ಜಾನೆಟ್ ದೂರಿನಲ್ಲಿ ತಿಳಿಸಿದ್ದಾರೆ. ರಾಜಾಜಿನಗರ ಪೊಲೀಸರು ಪ್ರಕರಣ ದಾಖಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.