ADVERTISEMENT

ಕುಡಿಯುವ ನೀರಿಗೆ ಅನುದಾನ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 19:30 IST
Last Updated 14 ಫೆಬ್ರುವರಿ 2012, 19:30 IST

ಯಲಹಂಕ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಗರದ ಪ್ರತಿ ವಾರ್ಡ್‌ಗೆ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೇಯರ್ ಪಿ. ಶಾರದಮ್ಮ ಹೇಳಿದರು.

ಬ್ಯಾಟರಾಯನಪುರ ವ್ಯಾಪ್ತಿಯ ರಾಮಚಂದ್ರಪುರದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಶಾಸಕ ಕೃಷ್ಣಬೈರೇಗೌಡ ಮಾತನಾಡಿ, `ಮಕ್ಕಳು ಖಾಸಗಿ ಶಾಲೆಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಒತ್ತು ನೀಡಬೇಕು~ ಎಂದು ಒತ್ತಾಯಿಸಿದರು.

ಪಾಲಿಕೆಯ ಆಡಳಿತ ಪಕ್ಷದ ನಾಯಕ ಬಿ.ಆರ್.ನಂಜುಂಡಪ್ಪ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ, ಬಿಬಿಎಂಪಿ ಸದಸ್ಯರಾದ ಎಂ.ಇ.ಪಿಳ್ಳಪ್ಪ, ಅಶ್ವತ್ಥನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.