ADVERTISEMENT

ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2011, 18:30 IST
Last Updated 7 ಮಾರ್ಚ್ 2011, 18:30 IST
ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರದಾನ
ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರದಾನ   

ಪೀಣ್ಯ ದಾಸರಹಳ್ಳಿ:  ಹೆಸರಘಟ್ಟ ರಸ್ತೆ ಬಾಗಲಗುಂಟೆಯ ಸಾಯಿ ಕಲ್ಯಾಣ ಮಂಟಪದಲ್ಲಿ ಕೆಂಗಲ್ ಹನುಮಂತಯ್ಯ ವಾಲಿಬಾಲ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಿತ್ತು.

ಸಮಾರಂಭ ಉದ್ಘಾಟಿಸಿದ ಸಂಸದ ಡಿ.ಬಿ.ಚಂದ್ರೇಗೌಡ, ‘ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಅವರ ಆದರ್ಶ ತತ್ವಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ, ‘ನಾಡು- ನುಡಿಯ ಏಳಿಗೆಗೆ ಕೆಂಗಲ್ ಹನುಮಂತಯ್ಯ ಅವರು ಮಹತ್ವದ ಕೊಡುಗೆ ನೀಡಿದ್ದಾರೆ’ ಎಂದು ಹೇಳಿದರು.

ಶಾಸಕರಾದ ಎಸ್.ಮುನಿರಾಜು, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸಿ.ಎಸ್.ಪುಟ್ಟೇಗೌಡ, ಪಾಲಿಕೆ ಸದಸ್ಯರಾದ ಬಿ.ಆರ್.ನಂಜುಂಡಪ್ಪ, ಬಿ.ಆರ್.ಚಂದ್ರಶೇಖರ್, ತಿಮ್ಮನಂಜಯ್ಯ, ಗಂಗಾಧರ್, ಗೋವಿಂದೇಗೌಡ, ಶಾರದಮ್ಮ ರಾಮಾಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಜಿ.ಆಂಜನಪ್ಪ, ಕೆಂಪಯ್ಯ, ಚಲನಚಿತ್ರ ನಟ ಕರಿಬಸವಯ್ಯ, ಸಂಸ್ಥೆಯ ಗೌರವಾಧ್ಯಕ್ಷ ಕೆ.ಮುನಿರಾಜು, ಅಧ್ಯಕ್ಷ ಎಂ.ಕೃಪಾಕರ್, ಕಾರ್ಯದರ್ಶಿ ಬಿ.ಬೊಮ್ಮಲಿಂಗಯ್ಯ, ಮುಖಂಡ ತಮ್ಮಣ್ಣ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.