ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ನಾಡಪ್ರಭು ಕೆಂಪೇಗೌಡರ 500ನೇ ಜಯಂತ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಹಲವು ಗಣ್ಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕನ್ನಡಪರ ಹೋರಾಟಗಾರರಾದ ಗೋ. ಮೂರ್ತಿ ಯಾದವ್, ಬೆಂಗಳೂರು ಜಲಮಂಡಳಿ ಅಧಿಕಾರಿ ವಿವೇಕಾನಂದ, ಸಮಾಜ ಸೇವಕ ಕವಿರಾಜ್ ಅರಸ್, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಧರ್, ಮಕ್ಕಳ ತಜ್ಞ ಡಾ. ಸೋಮಶೇಖರ್, ಹೈಕೋರ್ಟ್ ವಕೀಲ ಲಕ್ಷ್ಮೀಕಾಂತ್, ವಕೀಲ ಯತಿರಾಜ್, ಪತ್ರಕರ್ತರಾದ ರಾಮಚಂದ್ರಪ್ಪ ಹಾಗೂ ಎಸ್.ಸಿ. ದಿನೇಶ್‌ಕುಮಾರ್ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ಧರಿಸಿ ಕೆಂಪೇಗೌಡರ ಕಂಚಿನ ಪ್ರತಿಮೆ ನೀಡಿ ಗೌರವಿಸಲಾಯಿತು.
ಶಾಸಕ ಡಾ.ಸಿ.ಎನ್. ಅಶ್ವಥ್‌ನಾರಾಯಣ ಸಮಾರಂಭವನ್ನು ಉದ್ಘಾಟಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅತಿಥಿಯಾಗಿ ಮಾತನಾಡಿದರು. ವೇದಿಕೆಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಕೆ.ಎಂ. ನಾಗೇಂದ್ರಬಾಬು ಸ್ವಾಗತಿಸಿದರು. ಭಾನುಮತಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.