ADVERTISEMENT

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ: ಒಪ್ಪಿಗೆ

ಬನವಾಸಿ ಅಭಿವೃದ್ಧಿ ಪ್ರಾಧಿಕಾರವೂ ಅಸ್ತಿತ್ವಕ್ಕೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2018, 20:14 IST
Last Updated 23 ಫೆಬ್ರುವರಿ 2018, 20:14 IST

ಬೆಂಗಳೂರು: ‘ನಾಡಪ್ರಭು ಕೆಂಪೇಗೌಡರ ಕಾಲದ ಪರಂಪರೆ ತಾಣಗಳ ಅಭಿವೃದ್ಧಿ ಪ್ರಾಧಿಕಾರ’ ಮತ್ತು ‘ಬನವಾಸಿ ಅಭಿವೃದ್ಧಿ ಪ್ರಾಧಿಕಾರ’ಗಳ ಸ್ಥಾಪನೆ ಮಸೂದೆಗಳಿಗೆ ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.

ಇವೆರಡೂ ಪ್ರಾಧಿಕಾರಗಳ ಸ್ಥಾಪನೆಗೆ ತಲಾ ₹ 5 ಕೋಟಿ ಪ್ರಕಟಿಸಲಾಗಿದೆ.

ನಾಡಪ್ರಭು ಕೆಂಪೇಗೌಡರ ಪರಂಪರೆ ತಾಣಗಳು, ಪ್ರವಾಸೋದ್ಯಮ ಸ್ಥಳಗಳು ಮತ್ತು ಸ್ಮಾರಕಗಳನ್ನು ಅಭಿವೃದ್ಧಿಪಡಿಸಲು ‘ನಾಡಪ್ರಭು ಕೆಂಪೇಗೌಡ ಪರಂಪರೆ ತಾಣದ ಅಭಿವೃದ್ಧಿ ಪ್ರಾಧಿಕಾರ ಮಸೂದೆ’ ಮಂಡಿಸಿ, ಒಪ್ಪಿಗೆ ಪಡೆಯಲಾಯಿತು.

ADVERTISEMENT

ಈ ಪ್ರಾಧಿಕಾರದ ಮೂಲಕ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಪರಂಪರೆ ತಾಣಗಳು ಮತ್ತು  ಪ್ರವಾಸೋದ್ಯಮ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮಸೂದೆ ಮಂಡಿಸಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಸದನಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.