ADVERTISEMENT

ಕೆ.ಆರ್‌.ಪುರ: ಬಿಎಸ್‌ಎಫ್‌ ಯೋಧರಿಂದ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಯುಕ್ತ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧರು ಹಾಗೂ ಪೊಲೀಸರು ಕೆ.ಆರ್‌.ಪುರದಲ್ಲಿ ಸೋಮವಾರ ಪಥಸಂಚಲನ ನಡೆಸಿದರು.

200 ಪೊಲೀಸರು ಮತ್ತು 100 ಯೋಧರು ತಾಲ್ಲೂಕು ಕಚೇರಿಯಿಂದ ಹೊರಟು ಮಸೀದಿ ರಸ್ತೆ, ದೇವಸಂದ್ರ ಮುಖ್ಯರಸ್ತೆ, ಅಯ್ಯಪ್ಪನಗರ, ಭಟ್ಟರಹಳ್ಳಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮತದಾರರು ನಿರ್ಭಯವಾಗಿ ಮತ ಚಲಾಯಿಸಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ವೈಟ್‌ಫೀಲ್ಡ್ ವಿಭಾಗ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದರು.

ADVERTISEMENT

ಮಹದೇವಪುರ ವಲಯದ ಜಂಟಿ ಆಯುಕ್ತೆ ವಾಸಂತಿ ಅಮರ್‌, ‘ಮಹಿಳಾ ಮತದಾರರು ಹೆಚ್ಚಾಗಿರುವ ಕಡೆಗಳಲ್ಲಿ ಸಖಿ ಮತಗಟ್ಟೆಗಳನ್ನು (ಪಿಂಕ್‌ ಮತಗಟ್ಟೆ) ಸ್ಥಾಪಿಸಲಾಗುತ್ತದೆ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತ ಚಲಾಯಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.