ADVERTISEMENT

ಕೆಪಿಎಸ್‌ಸಿ: ಪ್ರಾಸಿಕ್ಯೂಟರ್‌ ನೇಮಕ ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 20:25 IST
Last Updated 26 ಜೂನ್ 2019, 20:25 IST

ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮ ನೇಮಕಾತಿ ಆರೋಪ ಎದುರಿಸುತ್ತಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಚ್.ಎನ್. ಕೃಷ್ಣ ಮತ್ತು ಇತರರ ವಿರುದ್ಧ ಮೊದಲನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ವಿಶೇಷ ಪ್ರಾಸಿಕ್ಯೂಟರ್‌ ನೇಮಕ ಮಾಡಬೇಕು’ ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಕೆ.ಆರ್. ಖಲೀಲ್ ಆಹ್ಮದ್ ಸೇರಿದಂತೆ ಒಟ್ಟು 11 ಜನರು ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕೆಪಿಎಸ್‌ಸಿ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಎಚ್‌.ಎನ್‌. ಕೃಷ್ಣ ಸೇರಿದಂತೆ 10 ಜನ ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದ್ದು, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ಜುಲೈ 15ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT