ADVERTISEMENT

ಕೆಪಿಎಸ್‌ಸಿ: ಮರು ಮೌಲ್ಯಮಾಪನಕ್ಕೆ ಬಿ.ಕೆ.ಚಂದ್ರಶೇಖರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:30 IST
Last Updated 6 ಡಿಸೆಂಬರ್ 2013, 19:30 IST

ಬೆಂಗಳೂರು:  2011ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಸಂದರ್ಶನ ನಡೆಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರಶೇಖರ್‌ ಒತ್ತಾಯಿಸಿದರು.

ಮರು ಮೌಲ್ಯಮಾಪನ ಮತ್ತು ಮರು ಸಂದರ್ಶನ ನಡೆಸಲು ರಾಜ್ಯ ಸಚಿವ ಸಂಪುಟ ಈಗಾಗಲೇ ನಿರ್ಧರಿಸಿದೆ. ನೇಮಕ ಪ್ರಕ್ರಿಯೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬುದನ್ನು ಸಿಐಡಿ ತನಿಖೆಯಿಂದ ಕಂಡುಕೊಂಡಿದೆ. ಆಯೋಗದ ಅಧ್ಯಕ್ಷರಾಗಿದ್ದ ಗೋನಾಳ ಭೀಮಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಎರಡು ಸದಸ್ಯರ ಹುದ್ದೆಗಳು ಖಾಲಿ ಇವೆ. ಇವು ಗಳಿಗೆ ದಕ್ಷರು ಮತ್ತು ಪ್ರಾಮಾಣಿಕರನ್ನು ನೇಮಕ ಮಾಡಬೇಕು ಎಂದು ಸರ್ಕಾರವನ್ನು ಕೋರಿದರು. ‘ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಲು ಆರಂಭಿಸಿದ ನಂತರ ನನಗೆ ಬೆದರಿಕೆ ಕರೆಗಳೂ ಬಂದಿವೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.