ADVERTISEMENT

ಕೆರೆ ಒತ್ತುವರಿ: ಬಿಡಿಎ ಪ್ರತಿವಾದಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 19:45 IST
Last Updated 4 ಡಿಸೆಂಬರ್ 2012, 19:45 IST

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಎಂ. ಶ್ರೀನಿವಾಸ್ ಅವರು ಕೆರೆ ಒತ್ತುವರಿ ಮಾಡಿಕೊಂಡು ನಿವೇಶನ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನೂ (ಬಿಡಿಎ) ಪ್ರತಿವಾದಿಯನ್ನಾಗಿ ಮಾಡುವಂತೆ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಶ್ರೀನಿವಾಸ್ ಅವರು ಕೆರೆಯನ್ನು ಅತಿಕ್ರಮಣ ಮಾಡಿಕೊಂಡು, ಅಲ್ಲಿ ಆಶ್ರಯ ಯೋಜನೆ ಅಡಿ ನಿವೇಶನಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಈ ಆದೇಶ ನೀಡಿತು. ಅರ್ಜಿಯಲ್ಲಿ ಹೇಳಲಾದ ಜಮೀನಿನಲ್ಲಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವರದಿ ನೀಡುವಂತೆ ಶ್ರೀನಿವಾಸ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.