ADVERTISEMENT

ಕೇಂದ್ರದ ಅನುದಾನ ಬಳಕೆ ವಿಫಲ: ಆರೋಪ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ರಾಜರಾಜೇಶ್ವರಿನಗರ: ಗ್ರಾಮೀಣಾಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಬಿಡುಗಡೆ ಮಾಡಿದ್ದರೂ ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಶಿವಕುಮಾರ್ ಆರೋಪಿಸಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಹಾಗೂ ಯಶವಂತಪುರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ದೊಡ್ಡಬೆಲೆಯಲ್ಲಿ ಹಮ್ಮಿಕೊಂಡಿದ್ದ `ಯುವಕರ ನಡಿಗೆ ಗ್ರಾಮದ ಕಡೆಗೆ~ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರ ಕನಸಿನ ಕಾರ್ಯಕ್ರಮವನ್ನು ಕಾರ್ಯಕರ್ತರು ತಿಳಿದುಕೊಂಡು ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ನಿಜವಾದ ಪಲಾನುಭವಿಗಳಿಗೆ ತಲುಪಿಸಲು ಜಾಗೃತಿ ವಹಿಸಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಸಂಜೀವ್‌ಕುಮಾರ್, ನರ್ಮ್ ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರದಿಂದ ಅನುದಾನ ಪಡೆಯುತ್ತಿರುವ ರಾಜ್ಯ ಸರ್ಕಾರ ಈ ಯೋಜನೆ ತನ್ನದು ಎಂದು ಬಿಂಬಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.

ನಗರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಂ. ಮಹೇಶ್‌ಬಾಬು ಮಾತನಾಡಿದರು. ವಿವಿಧ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಆರ್.ರವಿಕುಮಾರ್, ವರುಣ್, ಪ್ರಸನ್ನಕುಮಾರ್, ಕುಮಾರ್‌ಸಿಂಗ್, ಸಂತೋಷ್‌ಕುಮಾರ್, ಉತ್ತರ ಲೋಕಸಭಾ ಕ್ಷೇತ್ರದ ಉಪಾಧ್ಯಕ್ಷ ಸಂತೋಷ್‌ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಯಶೋಧಾ, ಪಳನಿ ನಾಗೇಶ್, ಸದಾಶಿವ ಹಾಜರಿದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.