ADVERTISEMENT

ಕೊಲೆ ಪ್ರಕರಣದ ತನಿಖೆ ಚುರುಕು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2011, 19:30 IST
Last Updated 26 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನ ಪ್ರಧಾನ ಕಚೇರಿಯ ಮುಖ್ಯ ವ್ಯವಸ್ಥಾಪಕ ಶಂಕರ ಪೂಜಾರಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಜಯನಗರ ಪೊಲೀಸರು ತೀವ್ರಗೊಳಿಸಿದ್ದಾರೆ.

ಶಂಕರ ಅವರ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು ಚಿನ್ನದ ಸರ, ಎರಡು ಉಂಗುರಗಳನ್ನು ದೋಚಿದ್ದಾರೆ. ಆ ನಂತರ ಅಲ್ಮೇರಾದಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಹಣ- ಆಭರಣ ದೋಚವ ಉದ್ದೇಶದಿಂದ ಕೊಲೆ ಮಾಡಲಾಗಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ: ಕೌಟುಂಬಿಕ ಕಲಹದಿಂದ ಬೇಸತ್ತ ರಮೇಶ್ (35) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‌ಎಎಲ್‌ನ ಕಾಡಬೀಸನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಂಜುಳಾ ಎಂಬುವರನ್ನು ವಿವಾಹವಾಗಿದ್ದ ಅವರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹದಿನೈದು ದಿನಗಳ ಹಿಂದೆ ಪತ್ನಿಯ ಮನೆಗೆ ಬಂದಿದ್ದ ರಮೇಶ್ ಮನೆಯ ಹಿಂದೆ ಇರುವ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಪತ್ನಿಯ ಜತೆ ಇದ್ದ ಭಿನ್ನಾಭಿಪ್ರಾಯವೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಆದರೆ ಇದೊಂದು ಕೊಲೆ ಎಂದು ರಮೇಶ್ ಅವರ ಪೋಷಕರು ದೂರಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.