ADVERTISEMENT

ಕೊಳೆಗೇರಿ ಮಂಡಳಿಯಲ್ಲಿ ಅವ್ಯವಹಾರ: ಆರೋಪ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:44 IST
Last Updated 26 ಮಾರ್ಚ್ 2018, 19:44 IST

ಬೆಂಗಳೂರು: ‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅನುಷ್ಠಾನಗೊಳಿಸಿರುವ ಎಲ್ಲರಿಗೂ ಸೂರು ಯೋಜನೆಯ 3ನೇ ಹಂತದ ಕಾಮಗಾರಿ ಗುತ್ತಿಗೆ ಹಂಚಿಕೆ ವೇಳೆ ₹800 ಕೋಟಿ ಭ್ರಷ್ಟಾಚಾರ ನಡೆದಿದೆ’ ಎಂದು ಬಿಜೆಪಿಯ ಎನ್.ಆರ್.ರಮೇಶ್ ಆರೋಪಿಸಿದರು.

‘ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ 338 ಕೊಳೆಗೇರಿ ಪ್ರದೇಶಗಳಲ್ಲಿ ₹2,661 ಕೋಟಿ ವೆಚ್ಚದಲ್ಲಿ 49,368 ಮನೆಗಳನ್ನು ನಿರ್ಮಿಸಲು 17 ಕಂಪನಿಗಳಿಗೆ ಕಾನೂನುಬಾಹಿರವಾಗಿ ಕಾರ್ಯಾದೇಶ ಪತ್ರ ನೀಡಲಾಗಿದೆ’ ಎಂದು ರಮೇಶ್‌ ದೂರಿದರು.

‘ಅಮ್ಮ ಕನ್‌ಸ್ಟ್ರಕ್ಷನ್ ಇಂಡಿಯಾ ಕಂಪನಿಯು ತ್ರಿಪುರಾದಲ್ಲಿ ಕಾಮಗಾರಿ ಪೂರ್ಣಗೊಳಿಸಿರುವ ಪ್ರಮಾಣಪತ್ರ ನೀಡಿ ಗುತ್ತಿಗೆ ಪಡೆದಿದೆ. ಆದರೆ, ಅಲ್ಲಿ ಈ ಕಂಪನಿಗೆ ಯಾವುದೇ ಕಾಮಗಾರಿಯ ಗುತ್ತಿಗೆ ನೀಡಿಲ್ಲ ಎಂದು ಅಲ್ಲಿನ ಸಂಸ್ಥೆಗಳು ಸ್ಪಷ್ಟಪಡಿಸಿವೆ. ಅವ್ಯವಹಾರ ನಡೆದಿರುವುದಕ್ಕೆ ಇದು ಸಾಕ್ಷಿ’ ಎಂದರು.

ADVERTISEMENT

‘ರಮೇಶ್‌ಗೆ ಆರೋಪ ಮಾಡುವುದು ಬಿಟ್ಟು ಬೇರೆ ಕೆಲಸ ಇಲ್ಲ’ ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ವಿ. ದೇವರಾಜ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.