ADVERTISEMENT

ಕ್ಯಾನ್ಸರ್‌ ಪೀಡಿತರ ಚಿಕಿತ್ಸೆಗೆ ‘ಮ್ಯೂಸಿಕ್‌ ಹೀಲ್ಸ್‌’

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2014, 19:30 IST
Last Updated 13 ಡಿಸೆಂಬರ್ 2014, 19:30 IST

ಬೆಂಗಳೂರು: ‘ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಗೆ ನೆರವಾಗಲು ಡಿ.20ರಂದು ನಗರದ ಯವನಿಕ ಸಭಾಂಗಣದಲ್ಲಿ ‘ಮ್ಯೂಸಿಕ್‌ ಹೀಲ್ಸ್‌’ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸ್ಮೈಲಿ ಚೈಲ್ಡ್‌ಹುಡ್‌ ಕ್ಯಾನ್ಸರ್‌ ಫೌಂಡೇಷನ್‌ ಸಂಸ್ಥಾಪಕಿ ಶಾಲ್ಮಲಿ ಸುರೇಶ್‌ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಂಗೀತ ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್‌ ಪೀಡಿತ ಬಡ ಮಕ್ಕಳ ಚಿಕಿತ್ಸೆಗಾಗಿ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗಕ್ಕೆ ನೀಡಲಾಗುವುದು’ ಎಂದರು.

‘ಸಮಾಜದಲ್ಲಿ ಪ್ರತಿಯೊಬ್ಬರು ಬಡ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ತಮಗೆ ಸಾಧ್ಯವಾದ ಸಹಾಯ ಮಾಡಬೇಕು. ನಾವು ನಮ್ಮಲ್ಲಿರುವ ಸಂಗೀತ ಪ್ರತಿಭೆಯನ್ನು ಬಳಸಿಕೊಂಡು ಅವರಿಗೆ ಸಹಾಯ ಮಾಡಲು ಈ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದು ಹೇಳಿದರು.

ಸಂಗೀತ ಕಾರ್ಯಕ್ರಮದ ಟಿಕೆಟ್ ದರ ₨ 100 ರೂ ಆಗಿದ್ದು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಡ ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ನೇರವಾಗಬೇಕು ಎಂದು ಅವರು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 94496 38164.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.